8ನೇ ಪ್ರಕರಣದ ಉಪಬಂಧಗಳಿಗೆ ಬಾಧಕವಾಗದಂತೆ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದರ್ಭನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು, ಅಂಥ ಮಾಹಿತಿಯನ್ನು ಒದಗಿಸುವುದರಿಂದ ರಾಜ್ಯವನ್ನು ಹೊರತುಪಡಿಸಿ ಒಬ್ಬ ವ್ಯಕ್ತಿಯು ಹೊಂದಿರುವ ಕೃತಿಸ್ವಾಮ್ಯದ ಉಲ್ಲಂಘನೆಯಾಗಬಹುದಾದಲ್ಲಿ ಮಾಹಿತಿಗಾಗಿ ಮಾಡಿದ ಕೋರಿಕೆಯನ್ನು ತಿರಸ್ಕರಿಸಬಹುದು. |